ಎ.ಎನ್. ರಮೇಶ್, ಗುಬ್ಬಿ
ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಜನಿಸಿದ ಇವರು ವೃತ್ತಿಯಲ್ಲಿ ಕಾರವಾರದ ಬಳಿಯ ಕೈಗಾದಲ್ಲಿರುವ ಭಾರತೀಯ ಅಣುಶಕ್ತಿ ನಿಗಮದ ಉದ್ಯೋಗಿಯಾಗಿದ್ದು, ಪ್ರವೃತ್ತಿಯಲ್ಲಿ ಸಾಹಿತಿ. ಸಾಹಿತ್ಯದ ವಿವಿಧ ಪ್ರಕಾರಗಳಾದ ಕವನ, ಚುಟುಕು, ಕಥೆ, ನಾಟಕ, ಚಿತ್ರಕಥೆ ರಚನೆಗಳಲ್ಲಿ ಇವರದು ಪಳಗಿದ ಕೈ. ಜೊತೆಗೆ ನಟನೆ, ನಿರೂಪಣೆ, ನಿರ್ದೇಶನಕ್ಕೂ ಎತ್ತಿದ ಕೈ. ‘ಗುಬ್ಬಿಯ ಕಲರವ’, ‘ಚುಟುಕು-ಚಿತ್ತಾರ’, ‘ಎಡನೀರೊಡನೆಯನಿಗೆ ಚುಟುಕು ಪುರ್ಷ್ಪಾಚನೆ’, ‘ಕೇಶವನಾಮ ಚೈತನ್ಯಧಾಮ’ ಎಂಬ ಚುಟುಕು ಸಂಕಲನಗಳು, ‘ಹನಿ-ಹನಿ’ ಎಂಬ ಹನಿಗವನಗಳ ಸಂಕಲನಗಳು ಪ್ರಕಟವಾಗಿವೆ. ‘ಭಾವದಂಬಾರಿ’ ಇವರ ಮೊದಲ ಕಥಾಸಂಕಲನ.
ಕಾಸರಗೋಡಿನ ಎಡನೀರಿನಲ್ಲಿ ನಡೆದ ಪ್ರಪ್ರಥಮ ಅಂತರರಾಜ್ಯ ಚುಟುಕು ಸಮ್ಮೇಳನದಲ್ಲಿ ‘ಚುಟುಕು ಭಾರ್ಗವ’ ಎಂಬ ಪ್ರಶಂಸೆ. ‘ಗುಬ್ಬಿಯ ಕಲರವ’ ಕೃತಿಗೆ ‘ಬಿ.ಕೃಷ್ಣ ಪೈ ಬದಿಯಡ್ಕ ಸ್ಮಾರಕ ಪ್ರಶಸ್ತಿ’, ೨೦೧೨ರಲ್ಲಿ ನಡೆದ ಕೇರಳ ರಾಜ್ಯ ೫ನೆಯ ಕನ್ನಡ ಸಮ್ಮೇಳನ ಮತ್ತು ಕೇರಳ-ಕರ್ನಾಟಕ ಉತ್ಸವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದವರಿಂದ ‘ಕಾವ್ಯ ಪ್ರಶಸ್ತಿ’, ಮಂಡ್ಯದ ‘ಅಡ್ವೈಸರ್’ ಪತ್ರಿಕೆಯ ೨೦೧೨ ರ ‘ಅಡ್ವೈಸರ್ ಸಾಹಿತ್ಯ ಪ್ರಶಸ್ತಿ’, ಬೆಂಗಳೂರಿನ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ (ರಿ) ಹಾಗೂ ಸುರ್ವೆ ಪತ್ರಿಕೆವತಿಯಿಂದ “ಎಡನೀರೊಡೆಯನಿಗೆ ಚುಟುಕು-ಪುಷ್ಪಾರ್ಚನೆ” ಕೃತಿಗೆ ರಾಜ್ಯಮಟ್ಟದ ವಿಶ್ವೇಶ್ವರ...