ಶ್ರೀ ಜಯಂತ ಕಾಯ್ಕಿಣಿ -
ಶ್ರೀ ಜಯಂತ ಗೌರೀಶ ಕಾಯ್ಕಿಣಿ ಕನ್ನಡದ ಸಮಕಾಲೀನ ಕಥೆಗಾರರಲ್ಲಿ ಪ್ರಮುಖರು. ಜಯಂತ್ ರ ಕತೆ-ಕಾವ್ಯಗಳಲ್ಲಿ ಸೂಕ್ಷ್ಮಸಂವೇದನೆ ಬಹುತೇಕ ಕಾಣಸಿಗುವ ವಸ್ತು.ಇಳಿಸಂಜೆಯ ಬಿಸಿಲು,ಬಿಸಿಲುಕೋಲು,ಪಾತರಗಿತ್ತಿ,ಬಣ್ಣ ಅವರ ಬರಹಗಳಲ್ಲಿ ಸಾಮಾನ್ಯವಾಗಿ ಪ್ರತಿಫಲಿಸುತ್ತಲೇ ಇರುತ್ತವೆ. ಮೆದುಮಾತಿನ,ಮೆಲುದನಿಯ ವ್ಯಕ್ತಿತ್ವ ಅವರದು. ಸಾಹಿತ್ಯ ಪ್ರಕಾರಗಳ ಹಲವು ವಿಭಾಗಗಳಲ್ಲಿ, ಕವಿಯಾಗಿ, ಈಟಿವಿ ಕನ್ನಡ ವಾಹಿನಿಯಲ್ಲಿ ಸಂದರ್ಶಕನಾಗಿ, ಸಿನೆಮಾ ಹಾಡುಗಳ ಸಾಹಿತಿ,ಸಂಭಾಷಣೆಗಾರನಾಗಿ, ಅಂಕಣಕಾರನಾಗಿ, ನಾಟಕಕಾರನಾಗಿ, ಕಥೆಗಾರನಾಗಿ, ಮತ್ತು ಕನ್ನಡಿಗರ (ಸಾಗರದಾಚೆಗೂ ನೆಲೆ ನಿಂತಿರುವ ಕನ್ನಡಿಗರ) ಅಚ್ಚುಮೆಚ್ಚಿನ ಲೇಖಕನಾಗಿ, ಶ್ರೀ ಜಯಂತ ಕಾಯ್ಕಿಣಿಯವರು ಮೆರೆಯುತ್ತಿದ್ದಾರೆ.