ಕೆ.ವಿ.ಸುಬ್ಬಣ್ಣ
ಕೆ.ವಿ.ಸುಬ್ಬಣ್ಣ (ಫೆಬ್ರುವರಿ ೨೦, ೧೯೩೨ - ಜುಲೈ ೧೬, ೨೦೦೫) ಕರ್ನಾಟಕದ ಓರ್ವ ಪ್ರಸಿದ್ಧ ರಂಗಕರ್ಮಿ ಮತ್ತು ಸಾಹಿತಿ.
ಜೀವನ :
ಕೆ.ವಿ.ಸುಬ್ಬಣ್ಣನವರ(ಕುಂಟಗೋಡು ವಿಭೂತಿ ಸುಬ್ಬಣ್ಣ) ಹುಟ್ಟೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೆಗ್ಗೋಡು. ೧೯೩೨ ಫೆಬ್ರವರಿ ೨೦ ರಂದು ಜನಿಸಿದ ಇವರು ಮುಂದೆ ಹೆಗ್ಗೋಡಿನಂತಹ ಚಿಕ್ಕ ಊರಿನಲ್ಲಿದ್ದುಕೊಂಡೇ ೧೯೪೯ ರಲ್ಲಿ ನೀಲಕಂಠೇಶ್ವರ ನಾಟ್ಯಸೇವಾ ಸಂಘ (ನೀನಾಸಂ)ರಂಗ ಸಂಸ್ಥೆಯನ್ನು ನಿರ್ಮಿಸಿ, ರಂಗ ಚಟುವಟಿಕೆಗಳ ಮೂಲಕ ಅಂತಾರಾಷ್ಟ್ರೀಯ ಗಮನ ಸೆಳೆದರು. ಈ ಮೂಲಕ ಗ್ರಾಮೀಣ ರಂಗಭೂಮಿಗೆ ತನ್ನದೇ ಆದ ಸ್ಥಾನ, ಪ್ರತಿಷ್ಠೆಗಳನ್ನು ತಂದುಕೊಟ್ಟರು. ನೀನಾಸಂ ಸಂಸ್ಥೆ ನಡೆಸುವ ತಿರುಗಾಟ ಇಂದು ಕನ್ನಡ ರಂಗಭೂಮಿಯ ಒಂದು ಅವಿಭಾಜ್ಯ ಅಂಗವಾಗಿದೆ. ಸಾಹಿತಿಯೂ ಆಗಿದ್ದ ಇವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ೨೦೦೫ ಜುಲೈ ೧೬ ರಂದು ಹೃದಯಾಘಾತದಿಂದ ನಿಧನರಾದರು. ಅಕ್ಷರ ಪ್ರಕಾಶನವನ್ನು ಕೆ.ವಿ.ಸುಬ್ಬಣ್ಣನವರು ಹೆಗ್ಗೋಡಿನಲ್ಲಿ ಸ್ಥಾಪಿಸಿದರು.