ಶ್ರೀ ಕೆದಂಬಾಡಿ ಜತ್ತಪ್ಪ ರೈ :
ತುಳು ಸಾಹಿತ್ಯದ ಹೆಸರಾಂತ ಕವಿ ಸಾಹಿತಿ ಶ್ರೀ ಕೆದಂಬಾಡಿ ಜತ್ತಪ್ಪ ರೈ ಪುತ್ತೂರು ತಾಲ್ಲೂಕಿನ ಕೆದಂಬಾಡಿಯಲ್ಲಿನ ೧೯೧೬ ರಂದು ಜನಿಸಿದರು. ತುಳು ಬರಹಗಳ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ತಮ್ಮ ಅಪಾರ ಸೇವೆಯನ್ನು ಸಲ್ಲಿಸಿದವರು.
ಕೃತಿಗಳು, ನಾಟಕಗಳು : ತುಳುತ್ತ ಪೋರ್ಲು ಅಜ್ಜಬಿರು
ಕುಜಿಲೆ ಪೂಜೆ (ಮೂಲ ಡಿ. ವಿ. ಜಿ. ಕನ್ನಡೊಗು ಕಣತ್ತಿನ ಉಮರ್ ಖಯ್ಯಾಮನ ರುಬಾಯತ್) ಅಸೆನಿಯಾಗೊ ಕಾಂತಗ ಜೋಗಿ (ಮೂಲ ಆಂಗ್ಲ ಕವಿ ಬೌನಿಂಗ್ನ ದಿ ಪೈಪರ್ ಬೊಕ್ಕ ಕುವೆಂಪು ಅವರ ಕಿಂದರ ಜೋಗಿ).
ಪುಸ್ತಕಗಳು : ಬೇಟೆಯ ನೆನಪುಗಳು, ಈಡೊಂದು ಹುಲಿಯೆರಡು ಬೇಟೆಯ ಉರುಳು ಬೆಟ್ಟದ ತಪ್ಪಲಿಂದ ಕಡಲ ತಡಿಯವರೆಗೆ, ಈ ಪುಸ್ತಕಗಳು ಶ್ರೀ ಕೆದಂಬಾಡಿ ಜತ್ತಪ್ಪ ರೈ ಅವರಿಗೆ ತುಂಬಾ ಖ್ಯಾತಿಯನ್ನು ತಂದಿವೆ. ಬೇಟೆಯ ನೆನಪುಗಳು ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಲಭ್ಯವಾಗಿದೆ. ಅನೇಕ ಸಂಘ ಸಂಸ್ಥೆಗಳಿಂದ ಸನ್ಮಾನ, ಪ್ರಶಸ್ತಿ ಗೌರವ ಪಡೆದ ಶ್ರೀ ಕೆದಂಬಾಡಿ ಜತ್ತಪ್ಪ ರೈಗಳು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದರು.
ಹಿರಿಯ ಸಾಹಿತಿ ಶ್ರೀ ಕೆದಂಬಾಡಿ ಜತ್ತಪ್ಪ ರೈ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ೧೯೯೪-೯೫ ಸಾಲಿನ ಗೌರವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.