ಡಾ. ಲಲಿತ ಕೆ.ಪಿ.
(ರಶ್ಮಿ ನಂಜಪ್ಪ ಕಳ್ಳಿಚಂಡ)
ಮಂಗಳೂರು ವಿಶ್ವವಿದ್ಯಾಲಯದಿಂದ ಪದವಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಚಿನ್ನದ ಪದಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದ ಡಾ. ಲಲಿತ ಅವರು ಮೈಸೂರು ವಿಶ್ವವಿದ್ಯಾನಿಲಯ ದಿಂದ ವೀರಾಜಪೇಟೆ ತಾಲೂಕಿನ ಸ್ಥಳನಾಮಗಳು ಎನ್ನುವ ವಿಷಯ ದಲ್ಲಿ ಡಾಕ್ಟರೇಟ್ ಪದವಿ ಪಡೆದಿರುತ್ತಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಮಡಿಕೇರಿ ಇವರು ಈ ಮಹಾಪ್ರಬಂಧವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿದ್ದಾರೆ. ಕೊಡವ ಭಾಷೆ ಹಾಗೂ ಅಲ್ಲಿನ ಬುಡಕಟ್ಟು ಭಾಷೆಗಳಲ್ಲಿ ಪ್ರಾವೀಣ್ಯತೆ ಪಡೆದ ಇವರು ಕೊಡಗಿನ ಸಂಸ್ಕೃತಿಯ ಕುರಿತು ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿಚಾರ ಸಂಕಿರಣಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದಾರೆ. ಇವರ ಸಂಶೋಧನಾ ಲೇಖನಗಳು ರಾಜ್ಯ, ರಾಷ್ಟ್ರಮಟ್ಟ ಹಾಗೂ ಅಂತಾ ರಾಷ್ಟ್ರೀಯಮಟ್ಟದ ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ.
ಪ್ರಸ್ತುತ ಇವರು ಬೆಂಗಳೂರಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಬಿ.ಎಂ.ಎಸ್. ಮಹಿಳಾ ವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.