ಸದಾನಂದ ಕನವಳ್ಳಿ
೧೮-೯-೧೯೩೫
ಸಾಹಿತ್ಯ, ಸಂಗೀತ, ಕ್ರೀಡಾ ಪ್ರೇಮಿ ಸದಾನಂದ ಕನವಳ್ಳಿಯವರು ಹುಟ್ಟಿದ್ದು ಸವಣೂರ ತಾಲ್ಲೂಕಿನ ಹಿರೇಮುಗದೂರ ಗ್ರಾಮದಲ್ಲಿ. ತಂದೆ ವೀರಪ್ಪ, ತಾಯಿ ವೀರಮ್ಮ. ಪ್ರಾರಂಭಿಕ ಶಿಕ್ಷಣ ಹಾವೇರಿ. ಧಾರವಾಡದ ಕರ್ನಾಟಕ ಕಾಲೇಜಿನಿಂದ ಬಿ.ಎ. (ಇಂಗ್ಲಿಷ್) ಮತ್ತು ಎಂ.ಎ. (ಇಂಗ್ಲಿಷ್) ಪದವಿ. ಡಾ. ವಿ.ಕೃ. ಗೋಕಾಕ್ ಮತ್ತು ಅರಮೆಂಡೊ ಮೆನೆಜಿಸ್ ಶಿಷ್ಯತ್ವ.
ಉದ್ಯೋಗಕ್ಕಾಗಿ ಸೇರಿದ್ದು ಹುಬ್ಬಳ್ಳಿಯ ಪಿ.ಸಿ. ಜಾಬಿನ ವಿಜ್ಞಾನ ಕಾಲೇಜು, ವಿಜಯ ಕಾಲೇಜು, ವಿಜಾಪುರದ ಎ.ಎಸ್.ಪಿ. ಕಾಮರ್ಸ್ ಕಾಲೇಜು. ವಿಜಾಪುರದಲ್ಲಿ ಉಪನ್ಯಾಸಕರಾಗಿ, ಕೊಪ್ಪಳದ ಗವಿಸಿದ್ದೇಶ್ವರ ಕಾಲೇಜು ಮತ್ತು ಮುನಿಸಿಪಲ್ ಆರ್ಟ್ಸ್ ಕಾಲೇಜು-ಲಕ್ಷ್ಮೇಶ್ವರದಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ ನಿವೃತ್ತಿ. ೧೯೯೧-೯೨ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಪ್ರಸಾರಾಂಗದ ನಿರ್ದೇಶಕರಾಗಿ ಹೊತ್ತ ಜವಾಬ್ದಾರಿ. ಅಲ್ಪಾವಯಲ್ಲಿ ೧೧೦ ಪುಸ್ತಕಗಳ ಪ್ರಕಟಣೆಯ ದಾಖಲೆ.
ಹಲವಾರು ಸಂಘ ಸಂಸ್ಥೆಗಳೊಡನೆ ಒಡನಾಟ. ಕರ್ನಾಟಕ, ಗುಲಬರ್ಗಾ ವಿಶ್ವವಿದ್ಯಾಲಯ ಕಾಲೇಜುಗಳ ಪ್ರಾಚಾರ್ಯರು ಮತ್ತು ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ, ಧಾರವಾಡದ ಸಿತಾರ ರತ್ನ ರಹೀಮ್ ಖಾನ್ ಸಮಿತಿ ಅಧ್ಯಕ್ಷರಾಗಿ, ಡಾ. ಪುಟ್ಟರಾಜ ಗವಾಯಿ ಪ್ರತಿಷ್ಠಾನದ ಅಧ್ಯಕ್ಷರಾಗಿ, ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಟ್ರಸ್ಟ್ ಸದಸ್ಯರಾಗಿ ನಿರ್ವಹಿಸಿದ ಜವಾಬ್ದಾರಿಗಳು.
ಹಲವಾರು ಜೀವನ ಚರಿತ್ರೆಗಳು, ಸಂಪಾದಿತ, ಅನುವಾದಿತ ...