ವಿನಾಯಕ ಕೃಷ್ಣ ಗೋಕಾಕ್
ಜನನ ೧೯೦೯ ಆಗಸ್ಟ್ ೯ ಸವಣೂರು,
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಹಲವು ರೀತಿಯಲ್ಲಿ ಅದೃಷ್ಠವಂತರು. ಅವರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು. ಕಲೋಪಾಸಕ, ಪಯಣ, ಸಮುದ್ರಗೀತೆಗಳು, ಬಾಳದೇಗುಲ, ಊರ್ಣನಾಭ, ಉಗಮ- ಇವು ಅವರ ಪ್ರಮುಖ ಕವನ ಸಂಕಲನಗಳು. ಭಾರತ ಸಿಂಧು ರಶ್ಮಿ ಮಹಾಕಾವ್ಯಕ್ಕೆ ಅವರಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ.